ಶಿವಮೊಗ್ಗ: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ, ಸಿ.ಟಿ. ರವಿ ರಾಜ್ಯಮಟ್ಟದಲ್ಲಿ ಹೇಳಿಕೆ ನೀಡಿದ್ದಾರೆ. ಈ ಚರ್ಚೆ ಎಲ್ಲಿವರೆಗೆ ಹೋಗುತ್ತದೆ ಎಂದು ನೋಡಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವ ಅಪೇಕ್ಷೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಇದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಮತ್ತು 110 ಸ್ಥಾನಕ್ಕೆ ನಿಂತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲು ಹಳೇ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕಾಗಿದೆ. ಈಗಾಗಲೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟಿಸುತ್ತಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ.