alex Certify BIG NEWS: ಶಾಲೆಗಳ ಆರಂಭಕ್ಕೆ ಇಂದೇ ಗೈಡ್ ಲೈನ್ ಪ್ರಕಟ; ಆ.23 ರೊಳಗೆ ಶಿಕ್ಷಕರಿಗೆ ವ್ಯಾಕ್ಸಿನ್ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆಗಳ ಆರಂಭಕ್ಕೆ ಇಂದೇ ಗೈಡ್ ಲೈನ್ ಪ್ರಕಟ; ಆ.23 ರೊಳಗೆ ಶಿಕ್ಷಕರಿಗೆ ವ್ಯಾಕ್ಸಿನ್ ಕಡ್ಡಾಯ

ಬೆಂಗಳೂರು: ಇನ್ನೊಂದೇ ವಾರದಲ್ಲಿ ಶಾಲೆಗಳು ಆರಂಭವಾಗಲಿದ್ದು, ಇಂದೇ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಆಗಸ್ಟ್ 23ರಿಂದ ಶಾಲೆಗಳು ಆರಂಭವಾಗುತ್ತಿದ್ದು, ಅಷ್ಟರಲ್ಲಿ ಎಲ್ಲಾ ಶಿಕ್ಷಕರು ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಸೂಚಿಸಲಾಗಿದೆ. ಶೇ.80 ರಷ್ಟು ಎಲ್ಲೆಡೆ ಲಸಿಕೆ ಹಾಕಲಾಗಿದೆ ಎಂದರು.

ಶೇ.2 ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ ಕಡೆ ಮಾತ್ರ ಶಾಲೆಗಳನ್ನು ಆರಂಭಿಸಲಾಗುತ್ತದೆ. ಮಕ್ಕಳಿಗೆ ಹಾಜರಾತಿ ಕಡ್ಡಾಯ ಮಾಡಿಲ್ಲ. ಸರ್ಕಾರ ಪೋಷಕರು ಹಾಗೂ ವಿದ್ಯಾರ್ಥಿಗಳ ಪರವಾಗಿಯೇ ನಿಂತಿದೆ. ಸೋಂಕು ಪತ್ತೆಯಾದರೆ ಅಂತಹ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...