ಬೆಂಗಳೂರು: ಸಚಿವರ ಖಾತೆ ಹಂಚಿಕೆ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮೊದಲ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಯಿತು.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ಸೆಪ್ಟೆಂಬರ್ 13ರಿಂದ 24ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ. 10 ದಿನಗಳಕಾಲ ವಿಧಾನಸೌಧದಲ್ಲಿಯೇ ಅಧಿವೇಶ ನಡೆಸಲಾಗುವುದು ಎಂದು ಹೇಳಿದರು.
ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ಮಹಿಳೆ….! ಮುಂದೇನಾಯ್ತು ನೋಡಿ
ಇನ್ನು ರಾಜ್ಯ ಮಾನಸಿಕ ಆರೋಗ್ಯ ಆರೈಕೆ ನಿಯಮಕ್ಕೆ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ. ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್ ವಿತರಣೆ, ಆರೋಗ್ಯ ಕೇಂದ್ರಗಳಲ್ಲಿ ಬಿ ಎಸ್ ಸಿ, ನರ್ಸಿಂಗ್ ವಿದ್ಯಾರ್ಥಿಗಳ ನೇಮಕಕ್ಕೆ ಅವಕಾಶ ನಿಡುವ ನಿಟ್ಟಿನಲ್ಲಿಯೂ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.