ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಯೋಜನೆಯಾದ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರಮುಖ ಬದಲಾವಣೆಗಳನ್ನು ತರಲು ತಯಾರಿ ನಡೆದಿದೆ.
ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಲ್ಲಿ ವಿವಿಧ ಚಿಕಿತ್ಸೆಯ ದರಗಳನ್ನು ನಿಗದಿಪಡಿಸಲಾಗುತ್ತದೆ. ಈ ದರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹಾಗಾಗಿ ಖಾಸಗಿ ವಲಯದ ಆಸ್ಪತ್ರೆಗಳು ಈ ಯೋಜನೆಯಲ್ಲಿ ಭಾಗವಹಿಸುವುದಿಲ್ಲ. ಖಾಸಗಿ ವಲಯದ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸಲು, ಸರ್ಕಾರ ಚಿಕಿತ್ಸೆಯ ದರಗಳನ್ನು ಬದಲಿಸಲು ಹೊರಟಿದೆ.
ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ, ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ವಿಮಾ ರಕ್ಷಣೆಯನ್ನು ನೀಡಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು, ಆಯುಷ್ಮಾನ್ ಭಾರತ್ ಯೋಜನೆಯ ದರಗಳನ್ನು ನಿರ್ಧರಿಸಲಿದೆ. ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ, ಶೀಘ್ರದಲ್ಲೇ ಚಿಕಿತ್ಸೆಯ ದರಗಳನ್ನು ಬದಲಾಯಿಸುವ ಸಾಧ್ಯತೆಯಿದೆ. ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಬದಲಾವಣೆ ಮಾಡಲಾಗುವುದು.
ಖಾಸಗಿ ಆಸ್ಪತ್ರೆಗಳು, ಆಯುಷ್ಮಾನ್ ಭಾರತ್ ಯೋಜನೆಗೆ ಸೇರಲು ಬಯಸುವುದಿಲ್ಲ. ಇಲ್ಲಿನ ದರಗಳು ಕೈಗೆಟುಕುವಂತಿಲ್ಲ. ಸದ್ಯ, ಆಯುಷ್ಮಾನ್ ಭಾರತ್ ಯೋಜನೆಗೆ ಸಂಬಂಧಿಸಿದ 23,000 ಆಸ್ಪತ್ರೆಗಳಲ್ಲಿ ಖಾಸಗಿ ವಲಯದ ಪಾಲು ಶೇಕಡಾ 40 ರ ಸಮೀಪದಲ್ಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ಆಸ್ಪತ್ರೆಗಳ ದರಗಳಲ್ಲಿ ಭಾರೀ ವ್ಯತ್ಯಾಸವಿದೆ. ಈ ಯೋಜನೆಯಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆ ಹೆಚ್ಚಾದಲ್ಲಿ, ಜನರಿಗೆ ಅನುಕೂಲವಾಗಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳು 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಲಭ್ಯವಾಗಲಿದೆ.