ನವದೆಹಲಿ: ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಳ್ಳಾರಿ ಹಾಗೂ ಆಂಧ್ರ ಪ್ರದೇಶಕ್ಕೆ ಭೇಟಿ ನೀಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
8 ವಾರಗಳ ಕಾಲ ಬಳ್ಳಾರಿಗೆ ತೆರಳಲು ಅನುಮತಿ ನೀಡುವಂತೆ ಜನಾರ್ಧನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ. ವಿನೀತ್ ಸಾರನ್ ನೇತೃತ್ವದ ಪೀಠ, 8 ವಾರಗಳ ಕಾಲ ಬಳ್ಳಾರಿ ಮತ್ತು ಆಂಧ್ರ ಪ್ರದೇಶಕ್ಕೆ ಹೋಗಲು ಅನುಮತಿ ನೀಡಿದೆ. ಆದರೆ ಬಳ್ಳಾರಿಗೆ ಭೇಟಿ ನೀಡುವಾಗ ಎಸ್.ಪಿ.ಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಈ ಮೂಲಕ ಜನಾರ್ಧನ ರೆಡ್ಡಿ ಅವರ ಜಾಮೀನು ಷರತ್ತುಗಳಲ್ಲಿ ಸಡಿಲಿಕೆ ಮಾಡಿದೆ.
ಆಯುಷ್ಮಾನ್ ಭಾರತ್: ಚಿಕಿತ್ಸಾ ದರದಲ್ಲಿ ಬದಲಾವಣೆ ತರಲಿದೆ ಸರ್ಕಾರ
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವ ವೆಳೆ ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಭೇಟಿ ನೀಡದಂತೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿತ್ತು.