ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿದ್ದರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಯೋಗೀಶ್ ಗೌಡ ಹತ್ಯೆ ಪ್ರಕರಣ ಹಾಗೂ ಸಾಕ್ಷ್ಯನಾಶ ಕೇಸ್ ಗಳಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವರು ಇಂದು ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಜೈಲಾಧಿಕಾರಿಗಳಿಗೆ ಬೇಲ್ ಆದೇಶ ಪ್ರತಿ ಸಿಕ್ಕಿಲ್ಲ. ಅಲ್ಲದೇ ಇಂದು ಸ್ಥಳೀಯ ನ್ಯಾಯಾಲಯಕ್ಕೆ ರಜೆ ಇರುವುದರಿಂದ ಶ್ಯೂರಿಟಿ ಸಲ್ಲಿಸುವುದು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಇಂದೂ ಕೂಡ ಜೈಲೆ ಗತಿಯಾಗಿದೆ.
2ನೇ ಡೋಸ್ ಪಡೆದವರ ಪೈಕಿ 87 ಸಾವಿರ ಜನರಿಗೆ ಕೊರೊನಾ ಸೋಂಕು, ಕೇರಳದಲ್ಲೇ ಗರಿಷ್ಠ!
ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ.