ಕಾಬೂಲ್: ಅಪ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮುಂದುವರೆದಿದ್ದು, ಕಾಬೂಲ್ ನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ ಮರಳಲು ಸಾಧ್ಯವಾಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಕ್ಷಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ.
ಕಾಬೂಲ್ ಏರ್ ಪೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಕನ್ನಡಿಗರಿಗೆ ಭಾರತಕ್ಕೆ ಮರಳಲು ಸಾಧ್ಯವಾಗದೇ ಸಂಕಷ್ಟಕ್ಕೀಡಾಗಿದ್ದಾರೆ. ಬೆಂಗಳೂರಿನ ಫ್ರೇಜರ್ ಟೌನ್, ಮಾರತ್ತಳ್ಳಿಯ ನಿವಾಸಿಗಳು, ಬಳ್ಳಾರಿಯ ಸಂಡೂರು ನಿವಾಸಿ, ಚಿಕ್ಕಮಗಳೂರಿನ ಎನ್.ಆರ್.ಪುರದ ಓರ್ವರು ಸೇರಿದಂತೆ ಕರ್ನಾಟಕದ ಹಲವರು ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದು, ತಮ್ಮನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆದೊಯ್ಯುವಂತೆ ಮನವಿ ಮಾಡಿದ್ದಾರೆ.
ಕಂದಾಯ ಅಧಿಕಾರಿಗೆ ಹಿಗ್ಗಾಮುಗ್ಗಾ ನಿಂದಿಸಿದ ಕಾಂಗ್ರೆಸ್ ಶಾಸಕ..! ಆಡಿಯೋ ವೈರಲ್
ಈ ನಡುವೆ ಅಪ್ಘಾನಿಸ್ತಾನದ ಕಂದಹಾರ್ ಹಾಗೂ ಹೇರಾಟ್ ನಲ್ಲಿರುವ ಭಾರತೀಯ ದೂತಾವಾಸ ಕಚೇರಿಗಳ ಮೇಲೆ ತಾಲಿಬಾನ್ ಉಗ್ರರು ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.