ಬೆಂಗಳೂರು: ವಿಧಾನಪರಿಷತ್ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. 30 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ಆದೇಶ ಹೊರಡಿಸಿದ್ದಾರೆ.
ಸಭಾಪತಿ ಬಸವರಾಜ ಹೊರಟ್ಟಿ ಅವರ ನಿರ್ದೇಶನದ ಮೇರೆಗೆ ವರ್ಗಾವಣೆ ಮಾಡಲಾಗಿದೆ. ಸಭಾಪತಿಗಳು ಸಚಿವಾಲಯದ ಆಡಳಿತಕ್ಕೆ ಚುರುಕು ಮುಟ್ಟಿಸಿದ್ದಾರೆ. ಉಪ ಕಾರ್ಯದರ್ಶಿ, ಅಧೀನ ಕಾರ್ಯದರ್ಶಿ, ಶಾಖಾಧಿಕಾರಿ, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಸೇರಿದಂತೆ 30 ಸಿಬ್ಬಂದಿಯನ್ನು ಬೇರೆ ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.