ಬಳ್ಳಾರಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ಸಂಸ್ಥೆಗಳ ನೌಕರರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ.
ಸಾರಿಗೆ ನೌಕರರ ವೇತನ ತಾರತಮ್ಯ ನಿವಾರಣೆ ಮಾಡಲಾಗುವುದು. ಹಬ್ಬದ ವೇಳೆ ತೊಂದರೆಯಾಗದಂತೆ ಎರಡು ತಿಂಗಳ ವೇತನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಸ್ತುತ ಸಾರಿಗೆ ಸಂಸ್ಥೆ ನಷ್ಟದಲ್ಲಿದ್ದು, ಕೋವಿಡ್ ಸಂದರ್ಭದಲ್ಲಿ ಬಸ್ ಗಳು ಪೂರ್ಣಪ್ರಮಾಣದಲ್ಲಿ ಭರ್ತಿಯಾಗುತ್ತಿಲ್ಲ. ಅಲ್ಲದೆ, ನೆರೆ ರಾಜ್ಯಗಳಿಗೆ ಬಸ್ ಸಂಚಾರ ಕೂಡ ಸ್ಥಗಿತವಾಗಿದೆ. ಈಗಿನ ಸಾರಿಗೆ ಸಂಸ್ಥೆಯನ್ನು ಲಾಭವಿಲ್ಲದೆ, ನಷ್ಟವೂ ಇಲ್ಲದಂತೆ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.