ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿ ನಡುವೆಯೇ ಸೋಂಕಿನ ವಿರುದ್ಧ ಹೋರಾಡಲು ಮಕ್ಕಳಿಗೂ ಕೋವಿಡ್ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ.
12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಮೊದಲ ಕೋವಿಡ್ ಲಸಿಕೆ ಝೈಕೋವ್ ಡಿ ನೀಡಲು ಭಾರತೀಯ ಔಷಧಿ ನಿಯಂತ್ರಣ ಸಂಸ್ಥೆ ಅನುಮೋದನೆ ನೀಡಿದೆ. ಈಗಾಗಲೇ ರಾಜ್ಯದ ಬೆಳಗಾವಿ ಜಿಲ್ಲೆ ಸೇರಿದಂತೆ 50 ಕಡೆಗಳಲ್ಲಿ ಯಶಸ್ವಿಯಾಗಿ ಟ್ರಯಲ್ ಕೂಡ ಮುಗಿದಿದೆ.
ಕೇರಳ ಮಾದರಿಯ 22 ಖಾದ್ಯಗಳೊಂದಿಗೆ ಧೋನಿ ಪತ್ನಿ – ಪುತ್ರಿಯಿಂದ ಓಣಂ ಸಂಭ್ರಮಾಚರಣೆ
ಮಕ್ಕಳಿಗೆ ಲಸಿಕೆ ನೀಡಲು ಡಿಸಿಜಿಐ ಅನುಮೋದನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಲಸಿಕೆಗೆ ಬೇಡಿಕೆ ಹೆಚ್ಚಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸೆಪ್ಟೆಂಬರ್ ನಿಂದ ಬೆಂಗಳೂರಿನಲ್ಲಿ ಝೈಕೋವ್ ಲಸಿಕೆಯನ್ನು ಮಕ್ಕಳಿಗೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.