ನವದೆಹಲಿ: ಇನ್ಫೋಸಿಸ್ ಸಂಸ್ಥೆಯಿಂದ ಅಭಿವೃದ್ಧಿಪಡಿಸಲಾದ ಆದಾಯ ತೆರಿಗೆ ಪೋರ್ಟಲ್ ನಲ್ಲಿ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ತೆರಿಗೆ ಪಾವತಿದಾರರಿಗೆ ತೊಂದರೆಯುಂಟಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ವಿಸ್ತರಿಸುವ ಸಾಧ್ಯತೆ ಇದೆ.
ಕೇಂದ್ರೀಯ ನೇರ ತೆರಿಗೆ ಮಂಡಳಿ 2020 -21 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಮತ್ತಷ್ಟು ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ತೆರಿಗೆ ಪಾವತಿದಾರರಿಗೆ ಆಗಿರುವ ತೊಂದರೆಯನ್ನು ಮನಗಂಡು ಕೇಂದ್ರ ಹಣಕಾಸು ಮಂತ್ರಾಲಯ ಐಟಿ ರಿಟರ್ನ್ಸ್ ಸಲ್ಲಿಕೆ ಗಡುವು ವಿಸ್ತರಿಸಲು ಚಿಂತನೆ ನಡೆಸಿದೆ. ಇನ್ಫೋಸಿಸ್ ಅಭಿವೃದ್ಧಿಪಡಿಸಿದ ಪೋರ್ಟಲ್ ನಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಇನ್ಫೋಸಿಸ್ ಸಿಇಓ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಸೆಪ್ಟಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದ್ದ ಐಟಿ ರಿಟರ್ನ್ಸ್ ಗಡುವನ್ನು ಮತ್ತೆ ವಿಸ್ತರಿಸಬಹುದು ಎಂದು ಹೇಳಲಾಗಿದೆ.