ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ನೀಡಲಾಗುತ್ತದೆ. ಪ್ರಥಮ ವರ್ಷಕ್ಕೆ ಪ್ರವೇಶ ಪಡೆದವರಿಗೆ ಟ್ಯಾಬ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಆಗಸ್ಟ್ 1 ರಿಂದ ಪ್ರಥಮ ವರ್ಷದ ಪದವಿ ತರಗತಿಗಳು ಶುರುವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಟ್ಯಾಬ್ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತವಾಗಿ ಟ್ಯಾಬ್ ವಿತರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
2021 -22 ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್ ಗೆ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಟ್ಯಾಬ್ ನೀಡಲಾಗುವುದು ಎಂದು ತಿಳಿಸಿದ್ದಾರೆ.