ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ 9 ರಿಂದ 12 ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭವಾಗಿವೆ. 1 ರಿಂದ 8ನೇ ತರಗತಿಗಳನ್ನು ಕೂಡ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.
ಒಂದು ವಾರದ ಪರಿಸ್ಥಿತಿಯನ್ನು ಆಧರಿಸಿ ಆಗಸ್ಟ್ 30 ಅಥವಾ ಸೆಪ್ಟೆಂಬರ್ 1 ರಂದು ತಜ್ಞರೊಂದಿಗೆ ಸಭೆ ನಡೆಸಿ 1 ರಿಂದ 8ನೇ ತರಗತಿಯನ್ನು ಆರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತಂತೆ ತಜ್ಞರ ಸಮಿತಿ ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಕೋವಿಡ್ ಸ್ಥಿತಿಗತಿಗಳನ್ನು ಆಧರಿಸಿ ಪ್ರಾಥಮಿಕ ಶಾಲೆಗಳನ್ನು ತೆರೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ಆಗಸ್ಟ್ 30 ಅಥವಾ ಸೆಪ್ಟೆಂಬರ್ 1 ರಂದು ತಜ್ಞರೊಂದಿಗೆ ಸಭೆ ನಡೆಸಲಾಗುವುದು. ತಜ್ಞರ ವರದಿಯನ್ನು ಆಧರಿಸಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪಾಸಿಟಿವಿಟಿ ರೇಟ್ ಆಧರಿಸಿ ಒಂದರಿಂದ ಎಂಟನೇ ತರಗತಿ ಗಳನ್ನು ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.