ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಈಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದು, ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕೊಟ್ಟ ಖಾತೆ ನಿಭಾಯಿಸಿ, ಬಳಿಕ ವರಿಷ್ಠರೊಂದಿಗೆ ಚರ್ಚಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭರವಸೆ ನೀಡಿದ್ದಾರೆ. ಹೀಗಾಗಿ ಇಂದು ನಾನು ನನ್ನ ಖಾತೆ ಜವಾಬ್ದಾರಿ ವಹಿಸಿಕೊಳ್ಳುತ್ತೇನೆ ಎಂದು ಹೇಳಿದರು.
BIG BREAKING: ಪ್ರಭಾವಿಗಳ, ನಟರ ಮಕ್ಕಳಿಂದಲೂ ಡ್ರಗ್ಸ್ ಸೇವನೆ; ಇಂದ್ರಜಿತ್ ಲಂಕೇಶ್ ಸ್ಫೋಟಕ ಮಾಹಿತಿ
ನಾನು ನನ್ನ ಬೇಡಿಕೆಯನ್ನು ಸಿಎಂ ಹಾಗೂ ಕಟೀಲ್ ಅವರಿಗೆ ತಿಳಿಸಿದ್ದೇನೆ. ನನ್ನ ಮನವಿ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.