ಮುಂಬೈ: ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆಯನ್ನು ರತ್ನಗಿರಿ ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕಪಾಳಕ್ಕೆ ಹೊಡೆಯುತ್ತೇನೆ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದ ಬಿಜೆಪಿ ನಾಯಕ, ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಬಂಧನ ಭೀತಿ ಹಿನ್ನೆಲೆಯಲ್ಲಿ ರಾಣೆ ಕೋರ್ಟ್ ಮೊರೆ ಹೋಗಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಜಾಗೊಳಿಸಿದ್ದ ನ್ಯಾಯಾಲಯ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.
ಸ್ಕ್ಯಾನಿಂಗ್ ನಲ್ಲಿ ಕಳ್ಳನ ಅಸಲಿಯತ್ತು ಬಯಲು
ಇದರ ಬೆನ್ನಲ್ಲೇ ರತ್ನಗಿರಿ ಪೊಲೀಸರು ನಾರಾಯಣ ರಾಣೆ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ.