ಚೆನ್ನೈ: ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಐಪಿಎಲ್ ಬೆಟ್ಟಿಂಗ್ ಸಂಬಂಧ ಎಂ.ಎಸ್. ಧೋನಿ ವಿರುದ್ಧ ಅಪಪ್ರಚಾರ ನಡೆಸಿದ ನೆಲೆಯಲ್ಲಿ ಅವರ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಲಾಗಿದೆ.
ಮದ್ರಾಸ್ ಹೈಕೋರ್ಟ್ ನಿಂದ ಎರಡು ವಾರ ಸುದ್ದಿಪ್ರಸಾರಕ್ಕೆ ತಡೆ ನೀಡಲಾಗಿದೆ. ಕೆಲವು ಸುದ್ದಿ ಸಂಸ್ಥೆಗಳ ವಿರುದ್ಧ ಎಂಎಸ್ ಧೋನಿ ದೂರು ನೀಡಿದ್ದರು. ಮದ್ರಾಸ್ ಹೈಕೋರ್ಟ್ ಗೆ ಈ ಕುರಿತಾಗಿ ಅರ್ಜಿ ಸಲ್ಲಿಸಿದ್ದರು.
ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಸುದ್ದಿ ಪ್ರಸಾರಕ್ಕೆ ತಡೆ ನೀಡಿದ ಮದ್ರಾಸ್ ಹೈಕೋರ್ಟ್ ಎರಡು ವಾರಗಳ ಕಾಲ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.