ಬಾರ್ಮೆರ್: ರಾಜಸ್ಥಾನದ ಬಾರ್ಮೆರ್ ನಲ್ಲಿ ಭಾರತೀಯ ವಾಯುಪಡೆಯ ಮಿಗ್-21 ಬೈಸನ್ ಯುದ್ಧವಿಮಾನ ಪತನವಾಗಿದೆ. ತರಬೇತಿ ನಿರತ ಪೈಲಟ್ ಅಪಾಯದಿಂದ ಪಾರಾಗಿದ್ದಾರೆ.
ತರಬೇತಿ ಸಮಯದಲ್ಲಿದ್ದ ವಿಮಾನ ಹಾರಾಟದಲ್ಲಿದ್ದಾಗ ತಾಂತ್ರಿಕ ದೋಷದಿಂದ ಪತನವಾಗಿದೆ. ವಿಮಾನ ನೆಲಕ್ಕೆ ಅಪ್ಪಳಿಸಿದ್ದು, ಬೆಂಕಿ ತಗುಲಿದೆ. ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಏರ್ ಫೋರ್ಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ತನಿಖೆಗೆ ಆದೇಶಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.