ಕೆಲವರು ಅನಿವಾರ್ಯ ಕಾರಣಗಳಿಂದ ವ್ಯಾಸಂಗ ತೊರೆದು ಉದ್ಯೋಗ ಮಾಡಬೇಕಾದ ಪರಿಸ್ಥಿತಿ ತಲೆದೋರಿರುತ್ತದೆ. ಮುಂದೆ ವ್ಯಾಸಂಗ ಮಾಡಬೇಕೆಂದರೂ ಸಹ ಉದ್ಯೋಗದ ಕಾರಣಕ್ಕೆ ಅದು ಸಾಧ್ಯವಾಗುವುದಿಲ್ಲ. ಇದೀಗ ರಾಜ್ಯ ಸರ್ಕಾರ ಉದ್ಯೋಗ ಮಾಡುತ್ತಲೇ ವ್ಯಾಸಂಗ ಮಾಡಬಯಸುವವರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ.
ಹೌದು, ರಾಜ್ಯದ 11 ಕಡೆ ಸಂಜೆ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಇದು ಆರಂಭವಾಗಲಿದೆ. ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ.
ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಕೋವಿಡ್ ಲಸಿಕೆ ನೀಡಲು ನಿರ್ಧಾರ ಶೀಘ್ರ
ಬೆಂಗಳೂರಿನ ಆರ್.ಸಿ. ಕಾಲೇಜು, ಬೆಳಗಾವಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ತುಮಕೂರಿನ ಬಿಎಚ್ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮೈಸೂರಿನ ಕುವೆಂಪು ನಗರದ ಪ್ರಥಮ ದರ್ಜೆ ಕಾಲೇಜು, ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರಿನ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಧಾರವಾಡದ ಕುಮಾರೇಶ್ವರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರದ ನವಭಾಗ್ ಖಾಜಾ ಕಾಲೋನಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕಲಬುರಗಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬಳ್ಳಾರಿಯ ಸರಳಾದೇವಿ ಸತೀಶ್ಚಂದ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆರಂಭವಾಗಲಿದೆ.