ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದೊಡ್ಡಣ್ಣ ಅವರಿಗೆ ಹಾರ್ಟ್ ರೇಟ್ ಕಡಿಮೆಯಾದ ಕಾರಣ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೇಸ್ ಮೇಕರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಎರಡು ದಿನಗಳ ಕಾಲ ದೊಡ್ಡಣ್ಣ ಅವರ ಚಿಕಿತ್ಸೆ ಮುಂದುವರೆಯಲಿದ್ದು, ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಹೃದಯ ಬಡಿತದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಿನ್ನೆ ಬೆಳಿಗ್ಗೆಯೇ ದೊಡ್ಡಣ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.