alex Certify ಜಾಮೀನು ಪಡೆದ ಆರೋಪಿಗೆ ವಿಶಿಷ್ಟ ಷರತ್ತು ವಿಧಿಸಿದ ನ್ಯಾಯಾಲಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಮೀನು ಪಡೆದ ಆರೋಪಿಗೆ ವಿಶಿಷ್ಟ ಷರತ್ತು ವಿಧಿಸಿದ ನ್ಯಾಯಾಲಯ

ಬಿಹಾರದ ಮಧುಬಾನಿ ಜಿಲ್ಲೆಯ ಜಾಂಜಿರ್​ಪುರದಲ್ಲಿರುವ ಜಿಲ್ಲಾ ನ್ಯಾಯಾಲಯವು ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪಿಗೆ ವಿಶಿಷ್ಟವಾದ ಷರತ್ತನ್ನು ವಿಧಿಸುವ ಮೂಲಕ ಜಾಮೀನು ಮಂಜೂರು ಮಾಡಿದೆ.

ಈ ಷರತ್ತಿನ ಪ್ರಕಾರ ಆರೋಪಿಗೆ ಮೂರು ತಿಂಗಳುಗಳ ಕಾಲ ಯಾವುದೇ ಐದು ಬಡ ವಿದ್ಯಾರ್ಥಿಗಳ ಶಿಕ್ಷಣಾಭ್ಯಾಸಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಹೇಳಲಾಗಿದೆ.

ಸೆಷನ್​ ಕೋರ್ಟ್​ನ ಹೆಚ್ಚುವರಿ ನ್ಯಾಯಾಧೀಶ ಅವಿನಾಶ್​ ಕುಮಾರ್​​ ಈ ಆದೇಶವನ್ನು ಹೊರಡಿಸಿದ್ದಾರೆ. ಮಾತ್ರವಲ್ಲದೇ ರಾಜ್ಯದ ಮದ್ಯ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಕೆ ನೀಡಿದ್ದಾರೆ.

ಆರೋಪಿಯನ್ನು ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಬಂಧಿಸಲಾಗಿತ್ತು. ಇದೀಗ ಈತನಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆರೋಪಿ​ ಐವರು ಬಡ ಮಕ್ಕಳ ಶಾಲಾ ಶುಲ್ಕ ಸೇರಿದಂತೆ ಮೂರು ತಿಂಗಳ ಶಿಕ್ಷಣಾಭ್ಯಾಸದ ಜವಾಬ್ದಾರಿಯನ್ನು ಹೊತ್ತಿರುವ ಬಗ್ಗೆ ಸಾಕ್ಷ್ಯ ಒದಗಿಸುವಂತೆಯೂ ಕೋರ್ಟ್ ಸೂಚನೆ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...