ಮೈಸೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಸಂತ್ರಸ್ತೆ ಪೊಲೀಸರಿಗೆ ತಮ್ಮ ಹೇಳಿಕೆ ನೀಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮೈಸೂರಿಗೆ ಭೇಟಿ ನೀಡಿರುವ ಗೃಹ ಸಚಿವರು, ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಂದಿರುವ ಸಂದಿಗ್ಧತೆಯನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿಯನ್ನು ಪೊಲೀಸರಿಗೆ ನೀಡುವಂತೆ ಪ್ರಾರ್ಥಿಸಿದ್ದೇನೆ. ಎಲ್ಲರ ಮನಸ್ಸಿನಲ್ಲಿ ಒಳ್ಳೆಯ ಭಾವನೆಗಳನ್ನು ನೀಡುವಂತೆ ಕೇಳಿದ್ದೇನೆ ಎಂದರು.
ವಾಸ್ತು ಶಾಸ್ತ್ರ ಪಾಲಿಸುವವರು ಮನೆಯಲ್ಲಿಡಬೇಡಿ ಈ ವಸ್ತು
ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಆರೋಪಿಗಳ ಪತ್ತೆಗೆ ಸ್ವಲ್ಪ ಸಮಯ ಬೇಕಿದೆ. ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿನ ಮಾಹಿತಿ ಹೇಳಲಾಗಲ್ಲ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು ಎಂದು ಹೇಳಿದರು.