ಲಖ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸವಾಲ್ ಹಾಕಿದ ಮಾಜಿ ಐಪಿಎಸ್ ಅಧಿಕಾರಿ ಅಮಿತಾಬ್ ರಾಥೋಡ್ ಅವರನ್ನು ಯುವತಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ವಿರುದ್ಧ ಅಮಿತಾಬ್ ರಾಥೋಡ್ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ.
ಬಿಎಸ್ಪಿ ಸಂಸದ 2019 ರಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ಥೆ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಆಕೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಎದುರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಘಟನೆಗೆ ಮೊದಲು ಸಂತ್ರಸ್ಥೆ, ಫೇಸ್ ಬುಕ್ ಲೈವ್ ನಲ್ಲಿ ಅಮಿತಾಭ್ ಠಾಗೋರ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ಹೆಸರು ಹೇಳಿದ್ದು, ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಡಿ ಅಮಿತಾಭ್ ಅವರನ್ನು ಬಂಧಿಸಲಾಗಿದೆ.
ಅಮಿತಾಭ್ ಅವರನ್ನು ಕಾರಿನಿಂದ ಕೆಳಗಿಳಿಸಿದ ಪೊಲೀಸರು ಎತ್ತಿಕೊಂಡೇ ಹೋಗಿದ್ದಾರೆ. ಎಫ್ಐಆರ್ ತೋರಿಸಿ ಹಾಗಾದರೆ ಬರುತ್ತೇನೆ. ಇಲ್ಲವಾದರೆ ನಿಮ್ಮೊಂದಿಗೆ ಬರುವುದಿಲ್ಲವೆಂದು ಅಮಿತಾಭ್ ವಾದ ಮಾಡಿದ್ದಾರೆ. ಆಗ ಪೊಲೀಸರು ಅವರ ವಾದಕ್ಕೆ ಮಣಿಯದೇ ಅವರನ್ನು ಬಲವಂತವಾಗಿ ಬಂಧಿಸಿದ್ದಾರೆ. ಇದೆಲ್ಲವೂ ವಿಡಿಯೋದಲ್ಲಿ ಸೆರೆಯಾಗಿದೆ.
ಕಾರ್ಯಕ್ಷಮತೆ ಸರಿಯಾಗಿಲ್ಲದ ಕಾರಣ ಕೇಂದ್ರ ಸಚಿವಾಲಯದ ಸೂಚನೆಯಂತೆ ಕಳೆದ ವರ್ಷ ಮಾರ್ಚ್ ನಲ್ಲಿ ಅವರು ನಿವೃತ್ತಿ ಪಡೆದುಕೊಂಡಿದ್ದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಈ ಹಿಂದೆ ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಬೆದರಿಕೆ ಹಾಕಿದ್ದಾರೆ ಎಂದು ಅಮಿತಾಭ್ ಆರೋಪಿಸಿದ್ದರು. ಆಗ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. ಮತ್ತೆ ಸೇವೆಗೆ ಸೇರಿದ್ದರು.