ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆಗಸ್ಟ್ 24ರಂದು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಘಟನೆ ನಡೆದ 85 ಗಂಟೆಗಳ ಬಳಿಕ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕ ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ಮೈಸೂರಿನಿಂದ ಹೊರಗೆ ಆರೋಪಿಗಳು ತಲೆಮರೆಸಿಕೊಂಡಿದ್ದು, ಹೊರರಾಜ್ಯದಲ್ಲಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.
ಸಂತ್ರಸ್ತೆ ಮತ್ತು ಸ್ನೇಹಿತನ ಮಾಹಿತಿ ಆದರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ಇವತ್ತು ಸಂಜೆ ಪೊಲೀಸರು ಅಧಿಕೃತ ಮಾಹಿತಿ ನೀಡುವ ಸಾಧ್ಯತೆ ಇದೆ. ಆರೋಪಿಗಳು ತಮಿಳುನಾಡು ಮೂಲದವರು ಎಂದು ಹೇಳಲಾಗಿದೆ.