ಬೆಂಗಳೂರು: ಪದವಿ ಕಾಲೇಜಿನ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವಿವಿಧ ವಿಷಯಗಳ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ ಸಂಬಂಧಿಸಿದಂತೆ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹುದ್ದೆಗಳ ಭರ್ತಿಗೆ ಆಯ್ಕೆ ಪ್ರಾಧಿಕಾರವಾಗಿದೆ.
ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಪರೀಕ್ಷೆ ನಡೆಸಿ ಮೆರಿಟ್ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. 57,700 ರೂ.ನಿಂದ 1,82,400 ರೂ. ಯುಜಿಸಿ ವೇತನ ಶ್ರೇಣಿ ಇದೆ.