alex Certify ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ಸೆ. 1 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ಸೆ. 1 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಬೆಂಗಳೂರು: ಸೆಪ್ಟೆಂಬರ್ 1 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಸೆ. 1 ವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್ 29, 30 ರಂದು ಕರಾವಳಿ ಮತ್ತು ಒಳನಾಡು ಜಿಲ್ಲೆಗಳು ಸೇರಿ 12 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಆಗಸ್ಟ್ 29 ರಂದು ಆರೆಂಜ್ ಅಲರ್ಟ್ ಮತ್ತು ಆಗಸ್ಟ್ 30 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಎರಡು ದಿನಗಳ ಕಾಲ ಕಲಬುರ್ಗಿ ಮತ್ತು ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...