ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ್ ಸೆಪ್ಟೆಂಬರ್ 2ರಂದು 50ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಪವರ್ ಸ್ಟಾರ್ ಪವನ್ ಕಲ್ಯಾಣ್ ಇತ್ತೀಚೆಗೆ ‘ಭೀಮ್ಲಾ ನಾಯಕ್’ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇದೀಗ ಪವನ್ ಕಲ್ಯಾಣ್ ಜನ್ಮದಿನದಂದು ಅವರ ನಟನೆಯ ‘ಗಬ್ಬರ್ ಸಿಂಗ್’ ಚಿತ್ರವನ್ನು ಆಂಧ್ರ ಮತ್ತು ತೆಲಂಗಾಣದಲ್ಲಿ 100 ಪ್ರದರ್ಶನಗಳನ್ನು ತೋರಿಸುವುದಾಗಿ ನಿರ್ಮಾಪಕ ಬಾಂದ್ಲಾ ಗಣೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
SHOCKING NEWS: ಶೌಚಾಲಯದಲ್ಲಿ ನೇಣಿಗೆ ಶರಣಾದ ಅತ್ಯಾಚಾರ ಆರೋಪಿ
ಈ ವಿಷಯ ತಿಳಿಯುತ್ತಿದ್ದಂತೆ ಪವನ್ ಕಲ್ಯಾಣ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿದ್ದಾರೆ. 2012 ಮೇ 11ರಂದು ಬಿಡುಗಡೆಯಾದ ಈ ಸಿನಿಮಾ 150 ಕೋಟಿ ಕಲೆಕ್ಷನ್ ಮಾಡಿತ್ತು.
ಹರೀಶ್ ಶಂಕರ್ ನಿರ್ದೇಶನದ ಈ ಚಿತ್ರವನ್ನು ಪರಮೇಶ್ವರ ಆರ್ಟ್ಸ್ ಪ್ರೊಡಕ್ಷನ್ ಬ್ಯಾನರ್ ನಿಂದ ನಿರ್ಮಾಣ ಮಾಡಲಾಗಿತ್ತು, ಪವನ್ ಕಲ್ಯಾಣ್ ಗೆ ಜೋಡಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದರು.