alex Certify ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 1 ರವರೆಗೆ ಮುಂದುವರಿಯಬಹುದು ಎಂದು ಹೇಳಲಾಗಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗಲಿದ್ದು, ಆಗಸ್ಟ್ 30 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...