ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಅಪ್ರಾಪ್ತೆಗೆ ಚುಂಬಿಸಿ ಲೈಂಗಿಕ ಕಿರುಕುಳ ನೀಡಿದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
16 ವರ್ಷದ ಬಾಲಕಿಯನ್ನು ಪ್ರೀತಿಸುವಂತೆ ಹಿಂದೆ ಬಿದ್ದಿದ್ದ ಆರೋಪಿ ಚಿಕ್ಕ ದೊಡ್ಡಬಿದರಕಲ್ಲು ನಿವಾಸಿಯಾಗಿದ್ದಾನೆ. ಬಾಲಕಿ ಈತನ ಪ್ರೀತಿ ನಿರಾಕರಿಸಿದ್ದಳು. ಶನಿವಾರ ಸಂಜೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಹಿಂಬಾಲಿಸಿ ಬಂದು ಬಾಲಕಿಯನ್ನು ಅಡ್ಡಗಟ್ಟಿ ಪ್ರೀತಿಸುವಂತೆ ಬಲವಂತ ಮಾಡಿ ಚುಂಬಿಸಿದ್ದು, ಇದರಿಂದ ಭಯಗೊಂಡ ಬಾಲಕಿ ಕಿರುಚಾಡಿದಾಗ ಪರಾರಿಯಾಗಿದ್ದಾನೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಾಲಕಿಯ ತಾಯಿ ಪೀಣ್ಯ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆನ್ನಲಾಗಿದೆ.