ನವದೆಹಲಿ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಖಾಲಿಯಿರುವ ಸಚಿವ ಸ್ಥಾನ ಭರ್ತಿ ಹಾಗೂ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಹೆಚ್ಚು ಮಹತ್ವ ಪಡೆದಿದೆ.
ನವದೆಹಲಿಯಲ್ಲಿ ಮಾತನಾಡಿದ ಅರುಣ್ ಸಿಂಗ್, ಖಾಲಿ ಇರುವ ಸಚಿವ ಸ್ಥಾನ ಭರ್ತಿ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದು, ಭರ್ತಿ ವೇಳೆ ಹೈಕಮಾಂಡ್ ಮಾರ್ಗದರ್ಶನವಿರುತ್ತದೆ. ಯಾರಿಗೆ ಸ್ಥಾನ ಕೊಡಬೇಕು ಎಂಬುದನ್ನು ಮುಖ್ಯಮಂತ್ರಿಗಳೇ ತೀರ್ಮಾನಿಸಲಿದ್ದಾರೆ ಎಂದರು.
ಲಿಗೊ ಬ್ಲಾಕ್ಸ್ ಜೋಡಿಸಿ ಹ್ಯಾರಿ ಪಾಟರ್ ಸಿನಿಮಾದ ಮ್ಯಾಜಿಕ್ ಶಾಲೆ ನಿರ್ಮಾಣ
ಸಚಿವ ಸ್ಥಾನಕ್ಕಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಸ್ ವಿಚಾರವಾಗಿ ಮಾತನಾಡಿದ ಅವರು, ಈವರೆಗೆ ರಮೇಶ್ ಜಾರಕಿಹೊಳಿ ನನ್ನನ್ನಾಗಲಿ, ಹೈಕಮಾಂಡ್ ಆಗಲಿ ಭೇಟಿಯಾಗಿಲ್ಲ. ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸರಿಯಾದ ಸಮಯದಲ್ಲಿ ತೀರ್ಮಾನಿಸುತ್ತೇವೆ ಎಂದು ಹೇಳಿದರು.
ಇನ್ನು ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೈಸೂರು, ಮಂಡ್ಯ, ಹಾಸನ ಬೆಂಗಳೂರು ಗ್ರಾಮಾಂತರ ಪ್ರಾಂತ್ಯದಲ್ಲಿ ಪ್ರವಾಸ ಕೈಗೊಂಡು ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆಯುವ ನಿಟ್ಟಿನಲ್ಲಿ ಕಾರ್ಯಕರ್ತರ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು.