ಬೆಂಗಳೂರು: ರಾಜ್ಯದಲ್ಲಿ 6, 7, 8 ನೇ ತರಗತಿ ಆರಂಭಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಶೇಕಡ 50 ರಷ್ಟು ಮಕ್ಕಳು ದಿನಬಿಟ್ಟು ದಿನ ಶಾಲೆಗೆ ಹಾಜರಾಗಬೇಕು. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ವಾರದಲ್ಲಿ 5 ದಿನ ತೆರೆಯಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಉಳಿದ ಎರಡು ದಿನ ಶಾಲೆಯನ್ನು ಸ್ವಚ್ಛಗೊಳಿಸಲು ಅವಕಾಶ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ ಶುಕ್ರವಾರದವರೆಗೆ ಶಾಲೆ ದಿನವೂ ನಡೆಯಲಿದ್ದು, ಮಕ್ಕಳು ದಿನ ಬಿಟ್ಟು ದಿನ ಶಾಲೆಗೆ ಬರಬೇಕಿದೆ. 6, 7 ಮತ್ತು 8 ನೇ ತರಗತಿಗಳನ್ನು ಸೋಂಕು ಕಡಿಮೆ ಇರುವ ತಾಲೂಕುಗಳಲ್ಲಿ ಆರಂಭಿಸಲು ಅನುಮತಿ ನೀಡಲಾಗಿದೆ. ಸೆಪ್ಟೆಂಬರ್ 6 ರಿಂದ ಶಾಲೆಗಳು ಆರಂಭವಾಗಲಿವೆ ಎಂದು ತಿಳಿಸಿದ್ದಾರೆ.