ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯರಾತ್ರಿ ತಮಿಳುನಾಡಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ರಾತ್ರಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 24ರಂದು ಮೈಸೂರು ಚಾಮುಂಡಿಬೆಟ್ಟದ ತಪ್ಪಲಿನ ಪ್ರದೇಶದಲ್ಲಿ ಸ್ನೇಹಿತನೊಂದಿಗೆ ಇದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆರೋಪಿಗಳು ಪರಾರಿಯಾಗಿದ್ದರು. ಘಟನೆ ನಡೆದ 85 ಗಂಟೆಗಳ ಒಳಗೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಒಂದೇ ಒಂದು ಬಸ್ ಟಿಕೆಟ್ ಮತ್ತು ಮೊಬೈಲ್ ಫೋನ್ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.