alex Certify ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ, ಲಿಖಿತ ಪರೀಕ್ಷೆಗೆ ತರಬೇತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ, ಲಿಖಿತ ಪರೀಕ್ಷೆಗೆ ತರಬೇತಿ

ಮಡಿಕೇರಿ: ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ.

ಆಸಕ್ತರು ಸೆಪ್ಟೆಂಬರ್ 7 ರೊಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ಆರ್.ರಾಜಣ್ಣ ಅವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...