ಬೆಂಗಳೂರು: ದೇಶಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರೆ ಇತ್ತ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಲೆ ಏರಿಕೆ ಬಗ್ಗೆ ಉಡಾಫೆ ಉತ್ತರ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅರುಣ್ ಸಿಂಗ್, ಬೇರೆ ಬೇರೆ ಯೋಜನೆಗಳಿಗೆ ಹಣ ಒದಗಿಸಬೇಕಾಗಿದೆ. ಹಾಗಾಗಿ ಬೆಲೆ ಏರಿಕೆ ಅನಿವಾರ್ಯ. ಹಣದುಬ್ಬರ ಕೇಂದ್ರ ಸರ್ಕಾರದ ಹತೋಟಿಯಲ್ಲಿದೆ ಎಂದು ಹೇಳಿದ್ದಾರೆ.
ಕ್ಷಣಾರ್ಧದಲ್ಲಿ ಡ್ರೋನ್ ಕ್ಯಾಮರಾ ತಿಂದು ತೇಗಿದ ಮೊಸಳೆ..!
ಬೆಲೆ ಏರಿಕೆ, ಹಣದುಬ್ಬರ ಇದೆಲ್ಲದರ ಬಗ್ಗೆ ಆರ್.ಬಿ.ಐ. ಗವರ್ನರ್ ಮಾತನಾಡುತ್ತಾರೆ. ಎಲ್ಲಾ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಆರೋಪಗಳನ್ನೇ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.