ಕೊರೊನಾ ಮೂರನೇ ಅಲೆಯ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ವಯಸ್ಕರಲ್ಲಿ 16 ಪ್ರತಿಶತ ಮಂದಿ ಸಂಪೂರ್ಣ ಲಸಿಕೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದೆ.
54 ಪ್ರತಿಶತ ಮಂದಿ ಕನಿಷ್ಟ 1 ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಹೇಳಿದೆ.
ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನದ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ಆಗಸ್ಟ್ ತಿಂಗಳೊಂದರಲ್ಲೇ 18.38 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ನೀಡಲಾಗಿದೆ ಎಂದು ಹೇಳಿದ್ರು.
ಆಗಸ್ಟ್ ತಿಂಗಳಲ್ಲಿ ಪ್ರತಿದಿನ ಸರಾಸರಿ 59.29 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಆಗಸ್ಟ್ ಕೊನೆಯ ವಾರದಲ್ಲಿ ಪ್ರತಿ ದಿನ 80 ಲಕ್ಷ ಡೋಸ್ ನೀಡಲಾಗಿದೆ ಎಂದು ಹೇಳಿದ್ರು.
ಸಿಕ್ಕಿಂ, ದಾದ್ರಾ, ನಗರ್ ಹವೇಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಮೊದಲ ಡೋಸ್ ಲಸಿಕೆಯನ್ನು 100 ಪ್ರತಿಶತ ಪೂರೈಸಿದ್ದಾರೆ ಎಂದು ಮಾಹಿತಿ ನೀಡಿದ್ರು .