ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರು ಲಖನೌನಲ್ಲಿನ ಪಕ್ಷದ ಕೇಂದ್ರ ಕಚೇರಿಗೆ ಅಚ್ಚರಿಯ ಭೇಟಿ ಕೊಟ್ಟು ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ.
2022ರಲ್ಲಿ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಎಸ್ಪಿ ಪಕ್ಷಕ್ಕೆ ಮುಲಾಯಂ ಅವರ ಈ ಭೇಟಿಯಿಂದ ಹೊಸ ಸ್ಫೂರ್ತಿ ಬಂದಿದೆ. ತಂದೆಯ ಪಕ್ಕದಲ್ಲೇ ನಿಂತಿದ್ದ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಕೂಡ ಭಾರಿ ಹುಮ್ಮಸ್ಸಿನಿಂದ ಕಾಣಿಸಿಕೊಂಡಿದ್ದು, ಈ ಬಾರಿ ಚುನಾವಣೆಯಲ್ಲಿ ಎಸ್ಪಿಗೆ 400 ಸೀಟುಗಳಲ್ಲಿ ಜಯ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
BIG NEWS: ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ; ಬರೋಬ್ಬರಿ 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಕಳೆದ ಎರಡು ವರ್ಷಗಳಿಂದಲೂ ವಯೋಸಹಜ ಕಾಯಿಲೆಗಳಿಂದಾಗಿ ಮುಲಾಯಂ ಅವರು ಪಕ್ಷದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದರು. ಎಸ್ಪಿ ಹಮ್ಮಿಕೊಂಡಿರುವ ಬಿಜೆಪಿ ಹಠಾವೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಸರಿಯಾಗಿ ಮುಲಾಯಂ ಪಕ್ಷದ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದು ವಿಶೇಷವಾಗಿದೆ. ಈ ವೇಳೆ ಅವರು ಕೂಡ 2022ರಲ್ಲಿ ಎಸ್ಪಿ ನೇತೃತ್ವದ ಸರ್ಕಾರ ರಚನೆಗೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.