ಬೆಂಗಳೂರು: ಮೈಸೂರಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ನಡೆದ ನಂತರದಲ್ಲಿ ಬೆಂಗಳೂರಲ್ಲಿಯೂ ಗ್ಯಾಂಗ್ ರೇಪ್ ನಡೆದಿದೆ. ಮಹಿಳಾ ಟೆಕ್ಕಿ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ.
ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಇಬ್ಬರು ನೈಜಿರಿಯಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಟೋನಿ ಮತ್ತು ಉಬಾಕಾ ಎಂಬುವರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ಟೋನಿ ಸಂತ್ರಸ್ತೆಗೆ ಪರಿಚಯವಿದ್ದ. ಆಗಸ್ಟ್ 29 ರಂದು ಸ್ನೇಹಿತರ ಮನೆಗೆ ಯುವತಿ ತೆರಳಿದ್ದು, ಮೂವರು ಜೊತೆಗೆ ಕುಳಿತು ಮದ್ಯ ಸೇವಿಸಿದ್ದಾರೆ. ಮದ್ಯದ ಅಮಲಿನಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತ ಯುವತಿ ಬಾಣಸವಾಡಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ದೂರು ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎನ್ನಲಾಗಿದೆ.