alex Certify BIG NEWS: ಶಾಸಕರ ಅದ್ಧೂರಿ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಅಧಿಕಾರಿಗಳು; ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಎಂದ ಎಸ್ ಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕರ ಅದ್ಧೂರಿ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಅಧಿಕಾರಿಗಳು; ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಎಂದ ಎಸ್ ಪಿ

ಬೆಳಗಾವಿ: ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡಗೌಡರ್ ಅವರ ಹುಟ್ಟುಹಬ್ಬ ಆಚರಣೆಯಲ್ಲಿ ಭಾಗಿಯಾಗಿದ್ದ ಪೊಲೀಸರು ಶಾಸಕರ ಮೇಲೆ ಹೂಮಳೆ ಸುರಿಸಿ ಸಂಭ್ರಮಿಸಿದ ವಿಡಿಯೋ ಭಾರಿ ವೈರಲ್ ಆಗಿದ್ದು, ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಶಾಸಕ ಮಹಾಂತೇಶ್ ದೊಡ್ಡಗೌಡರ್ ಹಾಗೂ ಅವರ ಪತ್ನಿಯನ್ನು ಕೂರಿಸಿ ಇಬ್ಬರ ಮೇಲೂ, ಪೊಲೀಸ್ ಅಧಿಕಾರಿಗಳು ಹೂಮಳೆ ಸುರಿಸಿದ್ದಾರೆ. ಬೈಲಹೊಂಗಲ ಡಿ ಎಸ್ ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಪೊಲೀಸ್ ಠಾಣೆ ಪಿ ಎಸ್ ಐ ಶೀಗಿಹಳ್ಳಿ, ಎಸ್ ಐ ವಿಶ್ವನಾಥ್ ಮಲ್ಲಣ್ಣವರ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಶಾಸಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಾಸಕರ ಅಂಧಾ ದರ್ಬಾರ್, ಪೊಲೀಸರಿಂದಲೇ ಕೋವಿಡ್ ನಿಯಮಗಳ ಉಲ್ಲಂಘನೆ, ಶಾಸಕರ ಮೇಲೆ ಹೂಮಳೆಗರೆದು ಸಂಭ್ರಮ… ಭಾರಿ ಚರ್ಚೆಗೆ ಕಾರಣವಾಗಿದೆ.

ಶಾಸಕರ ಹಾಗೂ ಪೊಲೀಸ್ ಅಧಿಕಾರಿಗಳ ನಡೆಗೆ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಶಾಸಕರ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖೆ ನಿಯಮದ ಪ್ರಕಾರ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...