ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಿಸಿಬಿ ಸಮರ ಮುಂದುವರೆದಿದ್ದು, ಬೆಂಗಳೂರಿನಲ್ಲಿ ನೈಜೀರಿಯಾ ಡ್ರಗ್ ಪೆಡ್ಲರ್ ನನ್ನು ಬಂಧಿಸಿರುವ ಪೊಲೀಸರು 1 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಫಿಲಿಪ್ಸ್ ಎಂದು ಗುರುತಿಸಲಾಗಿದೆ. ಬಂಧಿತನಿಂದ 500 ಗ್ರಾಂ ಎಂಡಿಎಂ, 400 ಗ್ರಾಂ ಎಕ್ಸ್ಟ್ ಸಿ ಟ್ಯಾಬ್ಲೆಟ್ ಸೇರಿ ಬರೋಬ್ಬರಿ 1 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
BREAKING: Tokyo Paralympics; ಭಾರತಕ್ಕೆ ಮತ್ತೊಂದು ಚಿನ್ನ – ಷಟ್ಲರ್ ಕೃಷ್ಣ ನಗರ್ ಗೆ ಚಿನ್ನದ ಪದಕ
ವೀಸಾ ನಿಯಮ ಉಲ್ಲಂಘಿಸಿ ಬೆಂಗಳೂರಿನಲ್ಲಿ ವಾಸವಾಗಿದ್ದ ಆರೋಪಿ, ಮುಂಬೈನಲ್ಲಿ ಕಡಿಮೆ ಬೆಲೆಯಲ್ಲಿ ಡ್ರಗ್ಸ್ ಖರೀದಿಸಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಆಧಾರದ ಮೇಲೆ ಕಮ್ಮನಹಳ್ಳಿ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ಡ್ರಗ್ ಪೆಡ್ಲರ್ ಸಿಕ್ಕಿಬಿದ್ದಿದ್ದಾನೆ.