ಲಂಡನ್: ಅಂಪೈರ್ ನಿರ್ಧಾರಕ್ಕೆ ಭಿನ್ನಾಭಿಪ್ರಾಯ ತೋರಿದ ಟೀಂ ಇಂಡಿಯಾ ಆಟಗಾರ ಕೆ.ಎಲ್. ರಾಹುಲ್ ಗೆ ದಂಡ ವಿಧಿಸಲಾಗಿದೆ.
ಲಂಡನ್ ನಲ್ಲಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ನ ಮೂರನೇ ದಿನದ ಪಂದ್ಯದಲ್ಲಿ, ಅಂಪೈರ್ ನಿರ್ಧಾರಕ್ಕೆ ಭಿನ್ನಾಭಿಪ್ರಾಯ ತೋರಿದ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮ್ಯಾನ್ ಕೆ.ಎಲ್. ರಾಹುಲ್ ಗೆ ಪಂದ್ಯ ಶುಲ್ಕದ ಶೇ.15ರಷ್ಟು ದಂಡ ವಿಧಿಸಲಾಗಿದೆ.
ಭಾರತದ 2ನೇ ಇನ್ನಿಂಗ್ಸ್ ನ 34ನೇ ಓವರ್ ನಲ್ಲಿ ಈ ಘಟನೆ ಸಂಭವಿಸಿದೆ. ಇದು ಐಸಿಸಿ ನೀತಿ ಸಂಹಿತೆಯ ಹಂತ 1ರ ಉಲ್ಲಂಘನೆಯಾಗಿದೆ.
BIG BREAKING: 5 ಸಾವಿರ ಶಿಕ್ಷಕರ ನೇಮಕಾತಿ, ಸಿಎಂ ಬೊಮ್ಮಾಯಿ ಮಾಹಿತಿ; ಸವಾಲು ಎದುರಿಸಲು ಮಕ್ಕಳನ್ನು ಸಜ್ಜುಗೊಳಿಸಲು ಕರೆ
ರಾಹುಲ್ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.8 ರ ನಿಯಮ ಉಲ್ಲಂಘಿಸಿರುವುದು ಕಂಡು ಬಂದಿದೆ. ಇದು ಅಂತಾರಾಷ್ಟ್ರೀಯ ಪಂದ್ಯದ ವೇಳೆ ಅಂಪೈರ್ ನಿರ್ಧಾರದಲ್ಲಿ ಭಿನ್ನಾಭಿಪ್ರಾಯವನ್ನು ತೋರಿಸುತ್ತದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದರ ಜೊತೆಗೆ, ರಾಹುಲ್ ಅವರ ಶಿಸ್ತಿನ ದಾಖಲೆಯಲ್ಲಿ ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸೇರಿಸಲಾಗಿದೆ. 24 ತಿಂಗಳ ಅವಧಿಯಲ್ಲಿ ಇದು ಮೊದಲ ಅಪರಾಧವಾಗಿದೆ ಎಂದು ಹೇಳಲಾಗಿದೆ.