alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ; ಒಂದೇ ದಿನದಲ್ಲಿ 43,903 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ; ಒಂದೇ ದಿನದಲ್ಲಿ 43,903 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದೇ ದಿನದಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 38,948 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,30,27,621ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 219 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 440752 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 404874 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 43903 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32181995 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 14,10,649 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 25,23,089 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 68,75,41,762 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...