ಸೆಪ್ಟೆಂಬರ್ 2ರಂದು ಪವರ್ ಸ್ಟಾರ್ ಪವನ್ ಕಲ್ಯಾಣ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗಿದ್ದ ‘ಭೀಮ್ಲಾ ನಾಯಕ್’ ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾದ 40 ನಿಮಿಷಗಳಲ್ಲಿ 1 ಮಿಲಿಯನ್ ವೀಕ್ಷಣೆ ಪಡೆದುಕೊಂಡಿತ್ತು ಇದೀಗ ಈ ಹಾಡು 15 ಮಿಲಿಯನ್ ವೀಕ್ಷಣೆ ಪಡೆದು ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ಈ ಹಾಡಿಗೆ ತಮನ್ ಎಸ್ ಸಂಗೀತ ನೀಡಿದ್ದಾರೆ.
BIG NEWS: ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ; 4 ಸಚಿವ ಸ್ಥಾನಕ್ಕಾಗಿ ಶಾಸಕರಿಂದ ಲಾಬಿ
ಸಾಗರ್ ಕೆ.ಚಂದ್ರ ನಿರ್ದೇಶನದ ಈ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ ಸಿತಾರ ಎಂಟರ್ಟೈನ್ಮೆಂಟ್ಸ್ ಲಾಂಛನದಲ್ಲಿ ಸೂರ್ಯದೇವರ ನಾಗವಂಶಿ ನಿರ್ಮಾಣ ಮಾಡಿದ್ದಾರೆ. ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದ ಈ ಹಾಡಿಗೆ ಗಾನ ಪ್ರಿಯರಿಂದ ಸಾಕಷ್ಟು ಮೆಚ್ಚುಗೆ ದೊರೆತಿವೆ.