alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 6, 7, 8 ನೇ ತರಗತಿ ಪುನಾರಂಭ: 1 ರಿಂದ 5 ನೇ ಕ್ಲಾಸ್ ಆರಂಭದ ಬಗ್ಗೆ ಸಚಿವ ನಾಗೇಶ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 6, 7, 8 ನೇ ತರಗತಿ ಪುನಾರಂಭ: 1 ರಿಂದ 5 ನೇ ಕ್ಲಾಸ್ ಆರಂಭದ ಬಗ್ಗೆ ಸಚಿವ ನಾಗೇಶ್ ಮಾಹಿತಿ

ಬೆಂಗಳೂರು: ಒಂದೂವರೆ ವರ್ಷದ ಬಳಿಕ 6, 7 ಮತ್ತು 8ನೇ ತರಗತಿಗಳ ಭೌತಿಕ ತರಗತಿಗಳು ರಾಜ್ಯದಲ್ಲಿ ಪುನಾರಂಭವಾಗಿದ್ದು, ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಬೆಂಗಳೂರಿನ ಜೀವನ್ ಬೀಮಾ ನಗರದಲ್ಲಿರುವ ಕರ್ನಾಟಕ್ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ ಸಚಿವರು, ವಿದ್ಯಾರ್ಥಿಗಳಿಗೆ ಚಾಕೋಲೇಟ್, ಗುಲಾಬಿ ಹೂ ನೀಡಿ ಸ್ವಾಗತಿಸಿದರು. ಶಾಲೆಯ ಶಿಕ್ಷಕರು ಕೂಡ ವಿದ್ಯಾರ್ಥಿಗಳನ್ನು ಖುಷಿಯಿಂದ ಬರ ಮಾಡಿಕೊಂಡರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಅದರಂತೆ ತರಗತಿಗಳಲ್ಲಿ ಒಂದು ಬೆಂಚಿಗೆ ಇಬ್ಬರು ಮಕ್ಕಳನ್ನು ಮಾತ್ರ ಕೂರಿಸಲಾಗಿದೆ. ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಶಾಲೆಗೆ ಹಾಜರಾಗುವ ಮಕ್ಕಳು ತಮ್ಮ ಪಾಲಕರು, ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರೌಢ ಶಾಲೆಯ 9 ಮತ್ತು 10ನೇ ತರಗತಿ ಮತ್ತು ಪಿಯು ತರಗತಿಗಳು ಸುರಕ್ಷತಾ ಕ್ರಮಗಳೊಂದಿಗೆ ಯಶಸ್ವಿಯಾಗಿ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಉನ್ನತಾಧಿಕಾರಿಗಳು, ಕೋವಿಡ್ -19 ತಜ್ಞರು, ಮಕ್ಕಳ ತಜ್ಞರು ಸೇರಿದಂತೆ ಸಂಬಂಧಪಟ್ಟ ಎಲ್ಲರಿಂದ ಅಭಿಪ್ರಾಯ ಸಂಗ್ರಹಿಸಿ, ಒಪ್ಪಿಗೆ ಪಡೆದು ಸೂಕ್ತ ಸಿದ್ದತೆಗಳನ್ನು ಮಾಡಿಕೊಂಡು 6ರಿಂದ 8ನೇ ತರಗತಿಗಳ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.

1 ರಿಂದ 5 ನೇ ತರಗತಿಗಳ ಭೌತಿಕ ತರಗತಿಗಳ ಆರಂಭಕ್ಕೆ ಎಂದಿನಂತೆ ತಜ್ಞರ ಅಭಿಪ್ರಾಯ, ಒಪ್ಪಿಗೆ ಪಡೆಯಲಾಗುತ್ತದೆ. 6 ರಿಂದ 8 ನೇ ತರಗತಿಗಳ ಭೌತಿಕ ತರಗತಿಗಳಲ್ಲಿ ಕಂಡು ಬರುವ ಅಂಶಗಳ ಆಧಾರದ ಮೇಲೆ 1 ರಿಂದ 5 ನೇ ತರಗತಿಗಳ ಆರಂಭದ ಕುರಿತು ನಿರ್ಧರಿಸಲಾಗುತ್ತದೆ’ ಎಂದು ತಿಳಿಸಿದರು.

ಶಾಲೆ ಅವಧಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸಲು ಈಗಾಗಲೇ ಸಾರಿಗೆ ಸಚಿವರು, ಅಧಿಕಾರಿಗಳ ಜೊತೆ ಮಾತನಾಡಲಾಗಿದೆ. ಕೋವಿಡ್ ಪೂರ್ವದಲ್ಲಿ ಶಾಲೆ ಅವಧಿಗೆ ಬಸ್‌ಗಳು ಸಂಚರಿಸುತ್ತಿದ್ದವು. ಈಗ ಭೌತಿಕ ತರಗತಿಗಳು ಆರಂಭವಾಗಿರುವ ಕಾರಣ ಅದೇ ಸಮಯಕ್ಕೆ ಬಹುತೇಕ ಬಸ್ ಸಂಚರಿಸುತ್ತಿವೆ. ಹೊಸದಾಗಿ ಪಾಸ್ ಪಡೆಯುವವರೆಗೆ ಮಕ್ಕಳು ಬಸ್‌ಗಳಲ್ಲಿ ಸಂಚರಿಸಲು ಹಳೇ ಪಾಸ್ ಅಥವಾ ಶಾಲೆಯ ಐಡಿ ಕಾರ್ಡ್ ತೋರಿಸಿದರೆ ಸಾಕು ಎಂದು ಸಚಿವರು ಹೇಳಿದರು.

ಸಾಮಾಜಿಕ ಅಂತರ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕಿರುವ ಕಾರಣ ಮಕ್ಕಳನ್ನು ಶಾಲೆಗೆ ಬಿಟ್ಟು ಬರಲು ಸಾಧ್ಯವಾಗುವ, ವಾಹನ ವ್ಯವಸ್ಥೆ ಹೊಂದಿರುವ ಪಾಲಕರು ಸ್ವತಃ ತಾವೇ ಬಿಟ್ಟು ಬರಬಹುದು ಎಂದು ಸಲಹೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...