ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಿಂದ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳು, ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ.
ಬೆಲೆ ಏರಿಕೆಯಿಂದ ಮಹಿಳೆಯರು ಸಂಕಷ್ಟಕ್ಕೆ ಈಡಾಗಿದ್ದಾರೆ. 2014ರಲ್ಲಿ 400 ರೂ. ಇದ್ದ ಅಡುಗೆ ಅನಿಲ ಸಿಲಿಂಡರ್ ದರ ಈಗ 950 ರೂಪಾಯಿಗೆ ತಲುಪಿದೆ. ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಏರಿಕೆಯಾಗಿದ್ದು, ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ. ರಾಜ್ಯಪಾಲರು, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಬೆಲೆಯೇರಿಕೆ ನಿಯಂತ್ರಿಸಲು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.