alex Certify BIG NEWS: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 369 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 369 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 37,875 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 369 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 441411 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 391256 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 39114 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32264051 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 15,53,745 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 78,47,625 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 70,75,43,018 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...