ಬೆಂಗಳೂರು: ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹತ್ಯೆಗೆ ಸುಪಾರಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸರು ಆರ್.ಟಿ.ಐ. ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರ್.ಟಿ.ಐ. ಕಾರ್ಯಕರ್ತನನ್ನು ರವಿ ಎಂದು ಗುರುತಿಸಲಾಗಿದೆ. ಹಲ್ಲೆ ಪ್ರಕರಣದ ಬಳಿಕ ನಾಪತ್ತೆಯಾಗಿದ್ದ ರವಿಗಾಗಿ ಪೊಲೀಸರು 40 ದಿನಗಳಿಂದ ಶೋಧ ನಡೆಸಿದ್ದರು. ಚಾಮರಾಜನಗರ ಜಿಲ್ಲೆಯ ಕಾಡಿನಲ್ಲಿ ತಲೆಮರೆಸಿಕೊಂಡಿದ್ದ ರವಿಯನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.
GOOD NEWS: ‘ನಿಫಾ’ ನಿಯಂತ್ರಣಕ್ಕೂ ಬರಲಿದೆ ‘ಕೋವಿಶೀಲ್ಡ್’ ಮಾದರಿ ಲಸಿಕೆ
ಕಳೆದ ಜುಲೈ 29ರ ರಾತ್ರಿ ಮನೆಯ ಬಳಿಯೇ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಐವರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.