ಬೆಂಗಳೂರು: ಕಲಬುರ್ಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ಮುಂದಾಗಿವೆ. ಆದರೆ ಕಲಬುರ್ಗಿ ಜೆಡಿಎಸ್ ಕಾರ್ಪೊರೇಟರ್ ಗಳ ಭೇಟಿ ಬಳಿಕ ಗೇಮ್ ಪ್ಲಾನ್ ಬದಲಿಸಿರುವ ಜೆಡಿಎಸ್ ಮೇಯರ್ ಸ್ಥಾನಕ್ಕೆ ಪಟ್ಟು ಹಿಡಿದಿದೆ.
ಜೆಡಿಎಸ್ ನ ಕಾರ್ಪೊರೇಟರ್ ಗಳು ಬೆಂಗಳೂರಿನ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ನಾವು ಬೇರೆ ಯಾವ ಪಕ್ಷಕ್ಕೂ ಬೆಂಬಲ ನೀಡಲ್ಲ. ಆದರೆ ನಮಗೆ ಕಾಂಗ್ರೆಸ್ ಅಥವಾ ಬಿಜೆಪಿ ಬೆಂಬಲಿಸಲಿ. ಮೇಯರ್ ಸ್ಥಾನ ನಮಗೆ ನೀಡಲಿ ಎಂದು ಹೇಳಿದ್ದಾರೆ.
ಈ ಬಾರಿ ವಿಘ್ನ ವಿನಾಶಕ ಗಣಪತಿ ಪೂಜೆಗೆ ಯಾವ ಮುಹೂರ್ತ ಶುಭ…?
ಕೇವಲ ನಾಲ್ಕು ವಾರ್ಡ್ ಗಳಲ್ಲಿ ಗೆಲುವು ಸಾಧಿಸಿರುವ ಜೆಡಿಎಸ್ ಕಲಬುರ್ಗಿ ಮೇಯರ್ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಗೆ ಶಾಕ್ ಆಗಿದೆ.