ಬೆಂಗಳೂರು: ಗಣೇಶೋತ್ಸವ ಆಚರಣೆಗೆ ವಿಧಿಸಲಾಗಿದ್ದ ಷರತ್ತುಗಳನ್ನು ಬದಲಿಸುವಂತೆ ಆಗ್ರಹಿಸಿ ಗಣೇಶಮೂರ್ತಿ ತಯಾರಕರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಬಿಬಿಎಂಪಿ ಮಣಿದಿದ್ದು, ಮಾರ್ಗಸೂಚಿಯಲ್ಲಿ ಕೊಂಚ ಬದಲಾವಣೆ ಮಾಡಿದೆ.
ಬೇಡಿಕೆ ಬಂದಲ್ಲಿ ವಾರ್ಡ್ ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ನೀಡುವುದಾಗಿ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಭರವಸೆ ನೀಡಿದ್ದಾರೆ. ಅಲ್ಲದೇ ಗಣೇಶೋತ್ಸವಕ್ಕೆ ಮೂರು ದಿನಗಳ ಆಚರಣೆ ನಿಯಮ, ಗಣೇಶ ಮೂರ್ತಿ ಎತ್ತರದ ಬಗ್ಗೆಯೂ ವಿಧಿಸಿದ್ದ ಷರತ್ತುಗಳನ್ನು ಪಾಲಿಕೆ ಹಿಂಪಡೆದಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಧರಣಿ ವಾಪಸ್ ಪಡೆದುಕೊಂಡಿದ್ದಾರೆ.
ಕಣ್ಣಂಚನ್ನು ತೇವಗೊಳಿಸುತ್ತೆ ಭಾವುಕ ಕ್ಷಣದ ಈ ವಿಡಿಯೋ
ಗಣೇಶೋತ್ಸವ ಆಚರಣೆಗೆ ಬಿಬಿಎಂಪಿ ವಿಧಿಸಿದ್ದ ಷರತ್ತುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಗಣೇಶ ಮೂರ್ತಿ ತಯಾರಕರ ಸಮಿತಿ, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು.