ಲಕ್ನೋ: ಬ್ಯಾಂಕ್ ನಿಂದ ತೆಗೆದುಕೊಂಡಿದ್ದ ಸಾಲ ಮರುಪಾವತಿಸಲು ಸಾಧ್ಯವಾಗದೆ 45 ವರ್ಷದ ರೈತ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಸುಖ್ರಾಮ್ ಭದೌರಿಯಾ, ಮೃತ ರೈತ. ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಬ್ಯಾಂಕ್ ನೋಟಿಸ್ ಪಡೆದ ಎರಡು ದಿನಗಳ ನಂತರ ರೈತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೇವಿನ ಮರದಲ್ಲಿ ಶವ ನೇತಾಡುತ್ತಿರುವುದನ್ನು ಕಂಡ ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.
ಇಲ್ಲಿದೆ ದೇಶದಲ್ಲೇ ಅತ್ಯಂತ ಉತ್ತಮವಾದ ’ಪ್ರವಾಸ ಯೋಗ್ಯ ಗ್ರಾಮ’
ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಶವವನ್ನು ಪೋಸ್ಟ್ ಮಾರ್ಟಮ್ ಗೆ ಕಳುಹಿಸಿದ್ದು, ತನಿಖೆ ಮುಂದುವರೆಸಿದ್ದಾರೆ.
ರೈತ ಸುಖ್ರಾಮ್ ಬ್ಯಾಂಕ್ ನಿಂದ 50,000 ರೂ. ಸಾಲ ಪಡೆದಿದ್ದ ಎನ್ನಲಾಗಿದೆ. ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡದ ಕಾರಣ ಬ್ಯಾಂಕ್ ನೋಟಿಸ್ ಕಳುಹಿಸಿತ್ತು. ಇದರಿಂದ ದಿಕ್ಕು ತೋಚದಾದ ರೈತ ಆತ್ಮಹತ್ಯೆಯ ದಾರಿ ಹಿಡಿದಿದ್ದಾನೆ.