ಹೈದರಾಬಾದ್: ಬೈಕ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು, ಪ್ರಜ್ಞಾಹೀn ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಟಾಲಿವುಡ್ ನಟ ಸಾಯಿ ಧರಮ್ ತೇಜ್ ಆರೋಗ್ಯದ ಬಗ್ಗೆ ಹೈದರಾಬಾದ್ ಅಪೊಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಸಾಯಿ ಧರಮ್ ತೇಜ್ ಅವರು ಆರೋಗ್ಯದಿಂದಾರೆ. ಆದರೆ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರ ಪ್ರಮುಖ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
BIG NEWS: ಅಧಿವೇಶನಕ್ಕೆ ಗೈರಾಗಲು ನಿರ್ಧರಿಸಿದ ಜಾರಕಿಹೊಳಿ ಸಹೋದರರು?; ಕುತೂಹಲ ಮೂಡಿಸಿದ ನಡೆ
ಧರಮ್ ತೇಜ್ ಆರೋಗ್ಯದ ಮೇಲೆ ವೈದ್ಯರಿಂದ ತೀವ್ರ ನಿಗಾ ಇಡಲಾಗಿದೆ. ಶೀಘ್ರದಲ್ಲಿಯೇ ಚೇತರಿಸಿಕೊಳ್ಳಲಿದ್ದಾರೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.