ಹೈದರಾಬಾದ್: ಬೈಕ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಟಾಲಿವುಡ್ ನಟ ಸಾಯಿ ಧರಮ್ ತೇಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 336, 184 ಎಂವಿ ಕಾಯ್ದೆಯಡಿ ಅತಿ ವೇಗ, ನಿರ್ಲಕ್ಷ್ಯ ಆರೋಪದಡಿ ಪೊಲೀಸರು ನಟ ಸಾಯಿ ಧರಮ್ ತೇಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸ್ನೇಹಿತರೊಂದಿಗೆ ಬೈಕ್ ರೈಡ್ ಗೆ ತೆರಳಿದ್ದ ಧರಮ್ ತೇಜ್ ನಿನ್ನೆ ತಡರಾತ್ರಿ ಹೈದರಾಬಾದ್ ನ ದುರ್ಗಮ್ ಚೆರುವು ಕೇಬಲ್ ಬ್ರಿಡ್ಜ್ ಬಳಿ ಬೈಕ್ ಸ್ಕಿಡ್ ಆಗಿ ಅಪಘಾತಕ್ಕೀಡಾಗಿದ್ದರು. ಅವರನ್ನು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉತ್ತರಾಖಂಡ್ನಲ್ಲಿ ಮಧ್ಯಮ ತೀವ್ರತೆಯ ಭೂಕಂಪ: 31 ಕಿಲೋಮೀಟರ್ವರೆಗೆ ನಡುಗಿದ ಭೂಮಿ
ಅತಿಯಾದ ವೇಗ ಹಾಗೂ ನಿರ್ಲಕ್ಷ್ಯವೇ ಸಾಯಿ ಧರಮ್ ತೇಜ್ ಅಪಘಾತಕ್ಕೆ ಕಾರಣವಾಗಿದೆ. ವಾಹನಗಳ ಸಂಚಾರದ ನಡುವೆಯೇ ಅತಿ ವೇಗವಾಗಿ ಸಾಯಿ ಧರಮ್ ತೇಜ್ ಬೈಕ್ ಓಡಿಸುತ್ತಿದ್ದ ದೃಶ್ಯ ಹಾಗೂ ಸ್ಕಿಡ್ ಆಗಿ ಬಿದ್ದಿರುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.